ಬಿಹಾರದಲ್ಲಿ ಶೇ.65 ಮೀಸಲಾತಿ ನಿರ್ಧಾರ ವಜಾಗೊಳಿಸಿದ ಪಾಟ್ನಾ ಹೈಕೋರ್ಟ್‌ ಆದೇಶಕ್ಕೆ ತಡೆ ಹೇರಲು ಸುಪ್ರೀಂ ಕೋರ್ಟ್‌ ನಕಾರ

Update: 2024-07-29 07:03 GMT

ಹೊಸದಿಲ್ಲಿ: ಬಿಹಾರದ ನಿತೀಶ್‌ ಕುಮಾರ್‌ ಸರ್ಕಾರಕ್ಕೆ ಹಿನ್ನಡೆಯುಂಟಾಗಿರುವ ಬೆಳವಣಿಗೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ 65 ಮೀಸಲಾತಿ ಒದಗಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಜಾಗೊಳಿಸಿದ ಪಾಟ್ನಾ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ವಿಧಿಸಲು ಇಂದು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಕಳೆದ ವರ್ಷ ಬಿಹಾರ ಸರ್ಕಾರ ಕೈಗೊಂಡ ಜಾತಿ ಸಮೀಕ್ಷೆಯ ನಂತರ ರಾಜ್ಯದ ಹಿಂದುಳಿದ ವರ್ಗಗಳು, ತೀರಾ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪಂಗಡಗಳ ಮೀಸಲಾತಿಯನ್ನು ಶೇ 50ರಿಂದ ಶೇ 65ಕ್ಕೆ ಏರಿಸಲಾಗಿತ್ತು. ಈ ಮೀಸಲಾತಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗಿತ್ತು.

ಆದರೆ ಬಿಹಾರ ಹೈಕೋರ್ಟ್‌ ತನ್ನ ಜೂನ್‌ 20ರ ಆದೇಶದಲ್ಲಿ ರಾಜ್ಯ ವಿಧಾನಸಭೆ ಅನುಮೋದಿಸಿದ ತಿದ್ದುಪಡಿಗಳು ಸಂವಿಧಾನ ವಿರೋಧಿ ಮತ್ತು ಸಮಾನತೆಯ ನೀತಿಯ ಉಲ್ಲಂಘನೆಯಾಗಿದೆ ಎಂದು ಹೇಳಿ ಅದನ್ನು ವಜಾಗೊಳಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News