ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಜಾಹೀರಾತು ಬಿಜೆಪಿ ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
Update: 2024-05-27 15:40 GMT
ಹೊಸದಿಲ್ಲಿ : ಲೋಕಸಭಾ ಚುನಾವಣೆಯ ಸಂದರ್ಭ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಜಾಹೀರಾತುಗಳನ್ನು ನೀಡುವುದನ್ನು ನಿರ್ಬಂಧಿಸುವ ಏಕ ಸದಸ್ಯ ನ್ಯಾಯಾಧೀಶರ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ ಕೋಲ್ಕತ್ತಾ ಉಚ್ಛ ನ್ಯಾಯಾಲಯ ನೀಡಿದ ಆದೇಶ ಪ್ರಶ್ನಿಸಿ ಬಿಜೆಪಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಹಾಗೂ ಕೆ.ವಿ. ವಿಶ್ವನಾಥನ್ ಅವರನ್ನು ಒಳಗೊಂಡ ರಜಾಕಾಲದ ಪೀಠ ಉಚ್ಛ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಮೇಲ್ನೋಟಕ್ಕೆ ಜಾಹೀರಾತು ಅವಹೇಳನಕಾರಿಯಾಗಿದೆ ಎಂದು ಪೀಠ ಹೇಳಿದೆ.
ಬಿಜೆಪಿ ಪರವಾಗಿ ಹಾಜರಾಗಿದ್ದ ಹಿರಿಯ ನ್ಯಾಯವಾದಿ ಪಿ.ಎಸ್. ಪಟ್ವಾಲಿಯಾ ಅವರು ಪೀಠ ಅರ್ಜಿಯ ವಿಚಾರಣೆ ನಡೆಸಲು ನಿರಾಸಕ್ತಿ ವ್ಯಕ್ತಪಡಿಸಿದ ಬಳಿಕ, ಅರ್ಜಿಯನ್ನು ಹಿಂಪಡೆಯಲು ಅನುಮತಿ ಕೋರಿದರು.
ಅನಂತರ ಪೀಠ ಅರ್ಜಿಯನ್ನು ವಜಾಗೊಳಿಸಿತು.