ಒಳಮೀಸಲಾತಿ ಆದೇಶದ ಕುರಿತ ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
Update: 2024-10-04 11:18 GMT
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಒಳಮೀಸಲಾತಿ ಕುರಿತ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಅತಿ ಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಅನ್ನು ಮರುಪರಿಶೀಲನೆ ಮಾಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು.
ಆ.1ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿರುವ ಹೆಚ್ಚು ಹಿಂದುಳಿದ ಜಾತಿಗಳಿಗೆ ಮೀಸಲಾತಿ ಸಿಗುವಂತೆ ನೋಡಿಕೊಳ್ಳಲು ಈ ಸಮುದಾಯಗಳಲ್ಲೇ ಉಪ-ವರ್ಗೀಕರಣ ಮಾಡಲು ರಾಜ್ಯಗಳಿಗೆ ಅನುಮತಿ ನೀಡಬಹುದಾಗಿದೆ ಎಂದು ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ನೇತೃತ್ವದ ಏಳು ಸದಸ್ಯರ ಸಂವಿಧಾನ ಪೀಠವು ತನ್ನ 6:1ರ ಬಹುಮತದ ತೀರ್ಪಿನಲ್ಲಿ ಹೇಳಿತ್ತು.