ರಾಜ್ಯಪಾಲರು ಮಸೂದೆಗಳನ್ನು ತಡೆಹಿಡಿಯುವಂತಿಲ್ಲ : ಸುಪ್ರೀಂ ಕೋರ್ಟ್

Update: 2025-04-08 11:50 IST
ರಾಜ್ಯಪಾಲರು ಮಸೂದೆಗಳನ್ನು ತಡೆಹಿಡಿಯುವಂತಿಲ್ಲ : ಸುಪ್ರೀಂ ಕೋರ್ಟ್
  • whatsapp icon

ಚೆನ್ನೈ : 10 ಪ್ರಮುಖ ಮಸೂದೆಗಳಿಗೆ ಅಂಕಿತ ಹಾಕದೆ ತಡೆಹಿಡಿದ ರಾಜ್ಯಪಾಲ ಆರ್ ಎನ್ ರವಿ ನಿರ್ಧಾರ ಕಾನೂನುಬಾಹಿರ ಮತ್ತು ನಿರಂಕುಶಯುತವಾದುದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ತಮಿಳುನಾಡು ಸರಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಗೆಲುವಾಗಿದೆ.

ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಆರ್.ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ, ರಾಜ್ಯಪಾಲರ ಕ್ರಮ ಕಾನೂನುಬಾಹಿರ ಮತ್ತು ನಿರಂಕುಶವಾಗಿದೆ. ಹೀಗಾಗಿ 10 ವಿಧೇಯಕಗಳ ಬಗ್ಗೆ ರಾಜ್ಯಪಾಲರು ತೆಗೆದುಕೊಂಡಿರುವ ಎಲ್ಲಾ ಕ್ರಮಗಳನ್ನು ಬದಿಗಿಡಲಾಗಿದೆ. ರಾಜ್ಯಪಾಲ ರವಿ ‘ಸದುದ್ದೇಶದಿಂದ’ ನಡೆದುಕೊಂಡಿಲ್ಲ ಎಂದು ಹೇಳಿದೆ.

ʼರಾಜ್ಯಪಾಲರು, ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡಲು ನಿರಾಕರಿಸುವಂತಿಲ್ಲ. ಅವರು ಸಂಪೂರ್ಣ ವೀಟೋವನ್ನು ಹೊಂದಿರುವಂತೆ ವರ್ತಿಸುವಂತಿಲ್ಲ. ವಿಧಿ 200ರ ಪ್ರಕಾರ, ರಾಜ್ಯಪಾಲರು ಚುನಾಯಿತ ರಾಜ್ಯ ಸರಕಾರದ ಸಲಹೆ ಮತ್ತು ಬೆಂಬಲದ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕುʼ ಎಂದು ನ್ಯಾಯಮೂರ್ತಿ ಪರ್ದಿವಾಲಾ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News