ಸ್ವಾತಿ ಮಲಿವಾಲ್‌ಗೆ ಹಲ್ಲೆ ಪ್ರಕರಣ | ಜಾಮೀನು ಕೋರಿ ಸುಪ್ರೀಂ ಮೆಟ್ಟಿಲೇರಿದ ಬಿಭವ್ ಕುಮಾರ್

Update: 2024-07-25 16:32 GMT

ಸ್ವಾತಿ ಮಲಿವಾಲ್‌,  ಬಿಭವ್ ಕುಮಾರ್ | PTI 

ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ರಾಜ್ಯ ಸಭಾ ಸದಸ್ಯೆ ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣದಲ್ಲಿ ಜಾಮೀನು ಕೋರಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಪ್ರಿಂ ಕೋರ್ಟ್ ನ ವೆಬ್‌ಸೈಟ್ ಪ್ರಕಾರ ಬಿಭವ್ ಕುಮಾರ್ ಅವರು ಜುಲೈ 19ರಂದು ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಅದನ್ನು ಜುಲೈ 24ರಂದು ನೋಂದಾಯಿಸಿದ್ದಾರೆ.

ಪ್ರಕರಣದಲ್ಲಿ ತನಗೆ ಜಾಮೀನು ನಿರಾಕರಿಸಿ ದಿಲ್ಲಿ ಉಚ್ಚ ನ್ಯಾಯಾಲಯ ಜುಲೈ 12ರಂದು ನೀಡಿದ ಆದೇಶವನ್ನು ಅವರು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ತನ್ನ ವಿರುದ್ಧದ ಆರೋಪ ಸುಳ್ಳು ಎಂದು ಅವರು ಪ್ರತಿಪಾದಿಸಿದ್ದಾರೆ. ತನಿಖೆ ಪೂರ್ಣಗೊಂಡಿರುವುದರಿAದ ಅವರ ಕಸ್ಟಡಿ ಮುಂದುವರಿಸುವ ಅಗತ್ಯತೆ ಇರಲಿಲ್ಲ ಎಂದು ಕೂಡ ಅವರು ಹೇಳಿದ್ದಾರೆ.

ಕೇಜ್ರಿವಾಲ್ ಅವರ ಆಪ್ತ ಕಾರ್ಯದಶಿಯಾಗಿದ್ದ ಬಿಭವ್ ಕುಮಾರ್ ಪ್ರಸಕ್ತ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಅವರು ಅರವಿಂದ್‌ ಕೇಜ್ರಿವಾಲ್ ಅವರ ನಿವಾಸದಲ್ಲಿ ಮೇ 13ರಂದು ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಭವ್ ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿದ ಸೆಕ್ಷನ್‌ಗಳ ಅಡಿಯಲ್ಲಿ ಮೇ 16ರಂದು ಪ್ರಕರಣ ದಾಖಲಿಸಲಾಗಿತ್ತು. ಮೇ 18ರಂದು ಬಂಧಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News