ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ಕುಂಠಿತಗೊಳಿಸಲು ಪ್ರಧಾನಿಯಿಂದ ವ್ಯವಸ್ಥಿತ ಪ್ರಯತ್ನ: ಸೋನಿಯಾ ಗಾಂಧಿ ವಾಗ್ದಾಳಿ

Update: 2024-03-21 12:46 IST
ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ಕುಂಠಿತಗೊಳಿಸಲು ಪ್ರಧಾನಿಯಿಂದ ವ್ಯವಸ್ಥಿತ ಪ್ರಯತ್ನ: ಸೋನಿಯಾ ಗಾಂಧಿ ವಾಗ್ದಾಳಿ
  • whatsapp icon

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ನಿಧಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇರ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ಕುಂಠಿತಗೊಳಿಸಲು ಪ್ರಧಾನಿ ಮೋದಿ ವ್ಯವಸ್ಥಿತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಸಾರ್ವಜನಿಕರಿಂದ ಸಂಗ್ರಹಿಸಲಾಗಿರುವ ನಿಧಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಹಾಗೂ ನಮ್ಮ ಖಾತೆಗಳಿಂದ ಬಲವಂತವಾಗಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ, ಇಂತಹ ಭಾರಿ ಸವಾಲಿನ ಸನ್ನಿವೇಶದಲ್ಲಿಯೂ, ಚುನಾವಣಾ ಪ್ರಚಾರವನ್ನು ಪರಿಣಾಮಕಾರಿ ನಡೆಸಲು ನಮ್ಮೆಲ್ಲ ಅತ್ಯುತ್ತಮ ಪ್ರಯತ್ನವನ್ನು ನಡೆಸುತ್ತಿದ್ದೇವೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News