ತರಗತಿಯ ಕರಿಹಲೆಗೆಯಲ್ಲಿ ‘ಜೈ ಶ್ರೀರಾಮ್’ ಬರೆದ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ; ಪ್ರಕರಣ ದಾಖಲು

Update: 2023-08-26 22:45 IST
ತರಗತಿಯ ಕರಿಹಲೆಗೆಯಲ್ಲಿ ‘ಜೈ ಶ್ರೀರಾಮ್’ ಬರೆದ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ; ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ.

  • whatsapp icon

ಜಮ್ಮು: ಜಮ್ಮು ಹಾಗೂ ಕಾಶ್ಮೀರದ ಕಥುವಾ ಜಿಲ್ಲೆಯ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿಗೆ ಥಳಿಸಿದ ಆರೋಪದಲ್ಲಿ ಶಿಕ್ಷಕರೋರ್ವರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಲಾಗಿದೆ. ತರಗತಿಯ ಕರಿ ಹಲಗೆಯಲ್ಲಿ ‘ಜೈ ಶ್ರೀರಾಮ್’ ಎಂದು ಬರೆದಿರುವುದಕ್ಕೆ ಶಿಕ್ಷಕ ತನಗೆ ಥಳಿಸಿದರು ಎಂದು ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿ ತಿಳಿಸಿದ್ದಾನೆ.

ಶಿಕ್ಷಕ ಹಾಗೂ ಪ್ರಾಂಶುಪಾಲರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 342, 504 ಹಾಗೂ 506ರ ಅಡಿಯಲ್ಲಿ ಹಾಗೂ ಬಾಲ ನ್ಯಾಯ (ಮಕ್ಕಳ ಆರೈಕೆ ಹಾಗೂ ರಕ್ಷಣೆ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಕುರಿತು ತನಿಖೆ ನಡೆಸಲು ಮೂವರು ಸದಸ್ಯರ ಸಮಿತಿ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. ಈ ಸಮಿತಿಯಲ್ಲಿ ಬನಿಯ ಉಪ ವಿಭಾಗೀಯ ದಂಡಾಧಿಕಾರಿ, ಕಥುವಾದ ಉಪ ಮುಖ್ಯ ಶಿಕ್ಷಣ ಅಧಿಕಾರಿ ಹಾಗೂ ಖರೋಟೆಯಲ್ಲಿರುವ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರು ಒಳಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News