ವಿವಾಹ ಕಾರ್ಯಕ್ರಮದ ಸಂಭ್ರಮಾಚಣೆಯ ಫೈರಿಂಗ್‌ಗೆ ಬಾಲಕಿ ಬಲಿ

Update: 2024-12-12 07:50 GMT

ಸಾಂದರ್ಭಿಕ ಚಿತ್ರ (PTI)

ಚಂಡೀಗಢ: ವಿವಾಹ ಕಾರ್ಯಕ್ರಮದ ಸಂಭ್ರಮಾಚರಣೆಯ ಅಂಗವಾಗಿ ನಡೆದ ಫೈರಿಂಗ್‌ನಲ್ಲಿ ಗುಂಡು ತಗುಲಿ 13 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಹರ್ಯಾಣದ ಹರ್ಯಾಣದ ಚರ್ಖಿ ದಾದ್ರಿಯಲ್ಲಿ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಚಖ್ರಿ ದಾದ್ರಿಯ ಭಿವಾನಿ ರಸ್ತೆಯಲ್ಲಿರುವ ಬ್ಯಾಂಕ್ವೆಟ್ ಹಾಲ್ ಒಂದರಲ್ಲಿ ಆಯೋಜಿಸಲಾಗಿದ್ದ ವಿವಾಹ ಕಾರ್ಯಕ್ರಮದಲ್ಲಿ ಮೃತ ಬಾಲಕಿ ಹಾಗೂ ಆಕೆಯ ಕುಟುಂಬದ ಸದಸ್ಯರು ಭಾಗವಹಿಸಿದ್ದಾಗ, ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಚಖ್ರಿ ದಾದ್ರಿ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುನೀಲ್ ಕುಮಾರ್, "ಬಾಲಕಿಯು ಸಂಭ್ರಮಾಚರಣೆ ಫೈರಿಂಗ್‌ನಲ್ಲಿ ಮೃತಪಟ್ಟಿದ್ದಾಳೆ. ಈ ಘಟನೆಯಲ್ಲಿ ಆಕೆಯ ತಾಯಿಗೂ ಗಾಯವಾಗಿದೆ. ಪ್ರಾಥಮಿಕ ತನಿಖೆಯ ಸಂದರ್ಭದಲ್ಲಿ, ಕೆಲವು ಯುವಕರು ಸಂಭ್ರಮಾಚರಣೆ ಹಾಗೂ ನೃತ್ಯದಲ್ಲಿ ತೊಡಗಿದ್ದರು ಎಂದು ತಿಳಿದು ಬಂದಿದೆ. ನಾವು ಆರೋಪಿಯನ್ನು ಪತ್ತೆ ಹಚ್ಚಲು ವಿವಾಹ ಕಾರ್ಯಕ್ರಮದ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಲಿದ್ದೇವೆ" ಎಂದು ಹೇಳಿದ್ದಾರೆ.

"ಘಟನೆಯ ತನಿಖೆ ಪ್ರಗತಿಯಲ್ಲಿದ್ದು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106 ಹಾಗೂ ಇನ್ನಿತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ" ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News