ಜಮ್ಮು ಕಾಶ್ಮೀರ | ಭಯೋತ್ಪಾದಕ ದಾಳಿಯಲ್ಲಿ ಓರ್ವ ವೈದ್ಯ, ಐವರು ವಲಸೆ ಕಾರ್ಮಿಕರ ಹತ್ಯೆ

Update: 2024-10-20 23:26 IST
ಜಮ್ಮು ಕಾಶ್ಮೀರ | ಭಯೋತ್ಪಾದಕ ದಾಳಿಯಲ್ಲಿ ಓರ್ವ ವೈದ್ಯ, ಐವರು ವಲಸೆ ಕಾರ್ಮಿಕರ ಹತ್ಯೆ

Photo : dailyexcelsior.com

  • whatsapp icon

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಗಗಂಗೀರ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಪ್ರದೇಶದಲ್ಲಿ ರವಿವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ವೈದ್ಯ ಮತ್ತು ಐವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು NDTV ವರದಿ ಮಾಡಿದೆ.

ಗುಂಡ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿಯೊಂದರ ಕಾರ್ಮಿಕರ ಕ್ಯಾಂಪ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಕೋರರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸೇನೆಯು ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News