ಥಾಣೆ: 1.85 ಕೋಟಿ ರೂ.ಮೌಲ್ಯದ ನಕಲಿ ಔಷಧಿಗಳು ವಶ; ಇಬ್ಬರ ವಿರುದ್ಧ ಪ್ರಕರಣ ದಾಖಲು

Update: 2024-12-16 14:58 GMT

ಸಾಂದರ್ಭಿಕ ಚಿತ್ರ | PC : freepik.com

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಎರಡು ಸ್ಥಳಗಳಲ್ಲಿ ದಾಳಿ ನಡೆಸಿದ ಆಹಾರ ಮತ್ತು ಔಷಧಿ ಆಡಳಿತ(ಎಫ್‌ಡಿಎ)ದ ಅಧಿಕಾರಿಗಳು 1.85 ಕೋಟಿ ರೂ.ಮೌಲ್ಯದ ನಕಲಿ ಔಷಧಿಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಕೆಲವು ತಿಂಗಳುಗಳಲ್ಲಿ ಭಿವಂಡಿಯಲ್ಲಿನ ಗೋದಾಮು ಮತ್ತು ಮೀರಾ ರೋಡ್‌ನ ಇನ್ನೊಂದು ಸ್ಥಳದಲ್ಲಿ ದಾಳಿಗಳನ್ನು ನಡೆಸಲಾಗಿದ್ದು,ಇಬ್ಬರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೋಲಿಸ್ ಅಧಿಕಾರಿಯೋರ್ವರು ತಿಳಿಸಿದರು.

ಆರೋಪಿಗಳು ನಕಲಿ ಔಷಧಿಗಳನ್ನು ತಯಾರಿಸುತ್ತಿದ್ದರು ಮತ್ತು ಅವುಗಳನ್ನು ಅಸಲಿ ತಯಾರಕರ ಉತ್ಪನ್ನಗಳು ಎಂದು ಸುಳ್ಳು ಹೇಳಿ ಮಾರಾಟ ಮಾಡುತ್ತಿದ್ದರು ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಔಷಧಿಗಳನ್ನು ಹಲವಾರು ರಾಜ್ಯಗಳಿಗೆ ಪೂರೈಸಲಾಗುತ್ತಿತ್ತು,ತನ್ಮೂಲಕ ರೋಗಿಗಳನ್ನು ವಂಚಿಸಲಾಗುತ್ತಿತ್ತು ಮತ್ತು ಸಾರ್ವಜನಿಕ ಆರೋಗ್ಯವನ್ನು ಅಪಾಯಕ್ಕೊಡ್ಡಲಾಗಿತ್ತು ಎಂದು ಎಫ್‌ಡಿಎ ಅಧಿಕಾರಿಗಳು ದೂರಿನಲ್ಲಿ ಆರೋಪಿಸಿದ್ದಾರೆ.

ಪೋಲಿಸರು ಶನಿವಾರ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಹಾಗೂ ಔಷಧಿಗಳು ಮತ್ತು ಸೌಂದರ್ಯವರ್ಧಕಗಳ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News