ಅನರ್ಹತೆ ಪ್ರಶ್ನಿಸಿ ಸುಪ್ರೀಂ ಮೆಟ್ಟಲೇರಿದ ಕೈ ‘ಶಾಸಕ’ರು

Update: 2024-03-05 15:24 GMT

ಸುಪ್ರೀಂಕೋರ್ಟ್ | Photo: PTI 

ಹೊಸದಿಲ್ಲಿ : ಇತ್ತೀಚೆಗೆ ನಡೆದ ಹಿಮಾಚಲಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದಕ್ಕಾಗಿ ಅನರ್ಹಗೊಂಡ ಆರು ಮಂದಿ ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಮಂಗಳವಾರ ಸುಪ್ರೀಂಕೋರ್ಟ್ ಮೆಟ್ಟಲೇರಿದ್ದಾರೆ.

ವಿಧಾನಸಭಾ ಸದಸ್ಯತ್ವದಿಂದ ತಮ್ಮನ್ನು ಅನರ್ಹಗೊಳಿಸುವ ಸ್ಪೀಕರ್ ಕುಲದೀಪ್ ಸಿಂಗ್ ಪಥಾನಿಯಾ ಅವರ ನಿರ್ಧಾರವನ್ನು ಪ್ರಶ್ನಿಸಿ ಈ ಆರು ಮಂದಿ ಸುಪ್ರೀಂಕೋರ್ಟ್‌ ಗೆ ಫೆಬ್ರವರಿ ತಿಂಗಳಲ್ಲಿ ಸುಪ್ರೀಂಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಈ 6 ಮಂದಿ ಶಾಸಕರು ಮತ ಚಲಾಯಿಸಿದ್ದರು. ಆನಂತರ ಪಕ್ಷದ ಸಚೇತಕಾಜ್ಞೆಯನ್ನು ಉಲ್ಲಂಘಿಸಿ ಬಜೆಟ್ ಮೇಲಿನ ಮತದಾನಕ್ಕೆ ಗೈರುಹಾಜರಾಗಿದ್ದರು.

ಆನಂತರ ಹಿಮಾಚಲದ ಆಡಳಿತರೂಢ ಕಾಂಗ್ರೆಸ್ ಪಕ್ಷವು, ಈ ಆರು ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಗೆ ಮನವಿ ಸಲ್ಲಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News