ಸಂವಿಧಾನದ ಪೀಠಿಕೆಗೆ 'ಜಾತ್ಯತೀತ', 'ಸಮಾಜವಾದಿ' ಪದ ಸೇರ್ಪಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
Update: 2024-11-25 09:02 GMT
ಹೊಸದಿಲ್ಲಿ: ಸಂವಿಧಾನದ ಪೀಠಿಕೆಗೆ ಸಮಾಜವಾದಿ ಮತ್ತು ಜಾತ್ಯತೀತ ಪದಗಳ ಸೇರ್ಪಡೆಗೆ ಸಂಬಂಧಿಸಿದ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವು ಪೀಠಿಕೆಗೂ ಅವಲಂಬಿಸುತ್ತದೆ. ರಿಟ್ ಅರ್ಜಿ ಬಗ್ಗೆ ಹೆಚ್ಚಿನ ಚರ್ಚೆ ಮತ್ತು ತೀರ್ಪು ನೀಡುವ ಅಗತ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠವು ಹೇಳಿದೆ.
1976ರಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿದ್ದಾಗ 42ನೇ ತಿದ್ದುಪಡಿಯ ಮೂಲಕ ಈ ಪದಗಳನ್ನು ಸಂವಿಧಾನದ ಮುನ್ನುಡಿಗೆ ಸೇರಿಸಲಾಗಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಅಶ್ವಿನಿ ಉಪಾಧ್ಯಾಯ ಮತ್ತು ಬಲರಾಮ್ ಸಿಂಗ್ ಎಂಬವರು ಈ ಕುರಿತು ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಪೀಠವು ನವೆಂಬರ್ 22ರಂದು ಈ ಕುರಿತು ಆದೇಶವನ್ನು ಕಾಯ್ದಿರಿಸಿತ್ತು.