ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಕುರಿತು ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
Update: 2024-05-17 17:42 IST

ಅರವಿಂದ್ ಕೇಜ್ರಿವಾಲ್, ಸುಪ್ರೀಂ ಕೋರ್ಟ್ | PC : PTI
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ತಮ್ಮ ಬಂಧನವನ್ನು ಪ್ರಶ್ನಿಸಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಕಾಯ್ದಿರಿಸಿದೆ.
ಅದೇ ಸಮಯ ಕಾನೂನಿನ ಅನುಸಾರ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಅವರಿಗೆ ಸ್ವಾತಂತ್ರ್ಯ ನೀಡಿದೆ.