140 ಕೋಟಿ ಭಾರತೀಯರ ಕನಸುಗಳನ್ನು ಬಜೆಟ್ ನನಸಾಗಿಸಲಿದೆ: ಕೇಂದ್ರ ಬಜೆಟ್ ಶ್ಲಾಘಿಸಿದ ಪ್ರಧಾನಿ ಮೋದಿ

Update: 2025-02-01 15:14 IST
Photo of Narendra Modi

ಪ್ರಧಾನಿ ನರೇಂದ್ರ ಮೋದಿ (Photo: PTI)

  • whatsapp icon

ಹೊಸದಿಲ್ಲಿ: ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ವಿಕಸಿತ ಭಾರತ ಬಜೆಟ್ 2025 ಅನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸರಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದ ಈ ಬಜೆಟ್ 140 ಕೋಟಿ ಭಾರತೀಯರ ಕನಸುಗಳನ್ನು ನನಸಾಗಿಸಲಿದೆ ಎಂದು ಮೆಚ್ಚುಗೆ ವ್ಯಕ್ತಿಪಡಿಸಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಿದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದು ಉಳಿತಾಯ ಮತ್ತು ಹೂಡಿಕೆಯನ್ನು ಹೆಚ್ಚಿಸುವ ಜನಪರ ಬಜೆಟ್. ನಾವು ಯುವಕರಿಗೆ ಹಲವು ವಲಯಗಳನ್ನು ತೆರೆದಿದ್ದೇವೆ. ಸಾಮಾನ್ಯ ನಾಗರಿಕರು ವಿಕಸಿತ ಭಾರತದ ಧ್ಯೇಯವನ್ನು ಮುನ್ನಡೆಸಲಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

“ಈ ಬಜೆಟ್ ಸಾಮಾನ್ಯ ಜನರ ಬಲವರ್ಧನೆಯಾಗಿದೆ. ಈ ಬಜೆಟ್ ಉಳಿತಾಯ, ಹೂಡಿಕೆ ಮತ್ತು ಬೆಳವಣಿಗೆಯನ್ನು ವೇಗವಾಗಿ ಹೆಚ್ಚಿಸುತ್ತದೆ. ಬಜೆಟ್ಗಳು ಹೆಚ್ಚಾಗಿ ಖಜಾನೆ ತುಂಬುವುದರ ಮೇಲೆ ಕೇಂದ್ರೀಕರಿಸುತ್ತವೆ. ಈ ಬಜೆಟ್ ಜನರ ಜೇಬು ತುಂಬುವ ಮತ್ತು ಉಳಿತಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸಾಮಾನ್ಯ ಜನರ ಬಜೆಟ್ಗಾಗಿ ನಾನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅವರ ಇಡೀ ತಂಡವನ್ನು ಅಭಿನಂದಿಸುತ್ತೇನೆ" ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News