"ಬಾಬಾ ಸಿದ್ದೀಕಿಯಂತೆ ಹತ್ಯೆ ಮಾಡ್ತೇವೆ": ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಗೆ 10 ದಿನಗಳಲ್ಲಿ ರಾಜೀನಾಮೆ ನೀಡುವಂತೆ ಬೆದರಿಕೆ

Update: 2024-11-03 11:43 IST
Photo of Yogi Adityanath

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ (Photo: PTI)

  • whatsapp icon

ಮುಂಬೈ: ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಗೆ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು,10 ದಿನಗಳಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯದಿದ್ದರೆ "ಬಾಬಾ ಸಿದ್ದೀಕಿಯಂತೆ ಹತ್ಯೆ ಮಾಡುವುದಾಗಿ ಜೀವ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.

ಮಾಜಿ ಸಚಿವ ಮತ್ತು ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಅವರ ಹತ್ಯೆ, ನಟ ಸಲ್ಮಾನ್ ಖಾನ್ ಗೆ ಸರಣಿ ಜೀವ ಬೆದರಿಕೆ ಬೆನ್ನಲ್ಲೇ ಆದಿತ್ಯನಾಥ್ ಗೂ ಜೀವ ಬೆದರಿಕೆ ಹಾಕಲಾಗಿದೆ ಎಂದು NDTV ವರದಿ ಮಾಡಿದೆ.

ಆದಿತ್ಯನಾಥ್ ಗೆ ಜೀವ ಬೆದರಿಕೆ ಸಂದೇಶವನ್ನು ಮುಂಬೈ ಟ್ರಾಫಿಕ್ ಪೊಲೀಸ್ ವಾಟ್ಸಾಪ್ ಸಹಾಯವಾಣಿ ಸಂಖ್ಯೆಗೆ ಕಳಹಿಸಲಾಗಿದೆ. ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶ ಕಳಹಿಸಲಾಗಿದ್ದು, 10 ದಿನಗಳಲ್ಲಿ ಆದಿತ್ಯನಾಥ್ ರಾಜೀನಾಮೆ ನೀಡದಿದ್ದರೆ, ಬಾಬಾ ಸಿದ್ದೀಕಿಯಂತೆ ಹತ್ಯೆ ಮಾಡಲಾಗುವುದು ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಬೆದರಿಕೆ ಸಂದೇಶದ ಮೂಲವನ್ನು ಕಂಡು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News