ವಿಶಾಖಪಟ್ಟಣಂ: ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ; ಮೂರು ಬೋಗಿಗಳು ಬೆಂಕಿಗಾಹುತಿ

Update: 2024-08-04 14:10 IST
ವಿಶಾಖಪಟ್ಟಣಂ: ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ; ಮೂರು ಬೋಗಿಗಳು ಬೆಂಕಿಗಾಹುತಿ

Screengrab:X/@TimesNow

  • whatsapp icon

ವಿಶಾಖಪಟ್ಟಣಂ: ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದಾಗ, ಕೋರ್ಬಾ-ವಿಶಾಖಪಟ್ಟಣಂ ಎಕ್ಸ್ ಪ್ರೆಸ್ ರೈಲಿನ ಮೂರು ಬೋಗಿಗಳು ಹೊತ್ತಿ ಉರಿದಿವೆ ಎಂದು ವರದಿಯಾಗಿದೆ.

ಬಿ-7 ಹವಾನಿಯಂತ್ರಿತ ಬೋಗಿಯಲ್ಲಿ ಮೊದಲಿಗೆ ಕಾಣಿಸಿಕೊಂಡ ಬೆಂಕಿಯು, ನಂತರ ಹತ್ತಿರದ ಇನ್ನೆರಡು ಬೋಗಿಗಳಿಗೂ ವ್ಯಾಪಿಸಿತು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಈ ಘಟನೆಗೆ ಇನ್ನಷ್ಟೆ ಕಾರಣ ತಿಳಿದು ಬರಬೇಕಿದ್ದು, ಈ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರು ಕೆಲ ಕಾಲ ಆತಂಕಕ್ಕೊಳಗಾದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News