ಗುಜರಾತ್ | ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ : ಮೂವರು ಮೃತ್ಯು
Update: 2025-01-05 08:57 GMT
ಗಾಂಧಿನಗರ: ಭಾರತೀಯ ಕೋಸ್ಟ್ ಗಾರ್ಡ್‌ನ ಎಎಲ್ ಹೆಚ್(ALH) ಧ್ರುವ್ ಹೆಲಿಕಾಪ್ಟರ್ ಗುಜರಾತ್‌ನ ಪೋರಬಂದರ್‌ನಲ್ಲಿ ಪತನಗೊಂಡಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇಬ್ಬರು ಪೈಲಟ್‌ಗಳು ಸೇರಿ ಮೂವರು ಹೆಲಿಕಾಪ್ಟರ್ ನಲ್ಲಿದ್ದು, ತರಬೇತಿಯ ವೇಳೆ
ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ಹೇಳಲಾಗಿದೆ.
ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ಘಟನೆಯನ್ನು ದೃಢಪಡಿಸಿದ್ದು, ಈ ಕುರಿತು
ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.