ತಿರುಪತಿಯ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ

Update: 2024-10-28 06:15 GMT

Photo credit: NDTV

ಆಂಧ್ರಪ್ರದೇಶ: ತಿರುಪತಿ ಜಿಲ್ಲೆಯ ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ದೇವಾಲಯದ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಪೊಲೀಸರ ಪ್ರಕಾರ, ಇಸ್ಕಾನ್ ದೇವಾಲಯದ ಸಿಬ್ಬಂದಿಗೆ ಅಕ್ಟೋಬರ್ 27ರಂದು ಈಮೇಲ್ ಮೂಲಕ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ.

ಬೆದರಿಕೆ ಸಂದೇಶದ ಬೆನ್ನಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದ ತಂಡಗಳು ಸ್ಥಳಕ್ಕೆ ತೆರಳಿ ದೇವಾಲಯದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ದೇವಾಲಯದ ಆವರಣದಲ್ಲಿ ಯಾವುದೇ ಸ್ಫೋಟಕ ಅಥವಾ ಇತರ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಸ್ಥಳದಲ್ಲಿ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

ಅ.26ರಂದು ತಿರುಪತಿ ಜಿಲ್ಲೆಯಲ್ಲಿ ಎರಡು ಪ್ರಮುಖ ಹೋಟೆಲ್ಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದವು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹುಸಿ ಬಾಂಬ್ ಬೆದರಿಕೆ ಎಂದು ಕಂಡು ಬಂದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News