ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ ; ಪ್ರಯೋಗಾಲಯ ವರದಿ
Update: 2024-09-19 14:54 GMT
ಅಮರಾವತಿ : ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು indiatoday.in ಗುರುವಾರ ವರದಿ ಮಾಡಿದೆ.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ನಂತರ ದೊಡ್ಡ ವಿವಾದವೊಂದು ಭುಗಿಲೆದ್ದಿದೆ.
ಈಗ, ಪಶು ಆಹಾರ ಮತ್ತು ಹಾಲಿನ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯದ NDDB CALF ನ ವರದಿಯು ತಿರುಪತಿ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದ ಮಾದರಿಗಳಲ್ಲಿ ತಾಳೆ ಎಣ್ಣೆ, ಮೀನಿನ ಎಣ್ಣೆ, ದನದ ಕೊಬ್ಬು ಸೇರಿದಂತೆ ಹಂದಿಯ ಕೊಬ್ಬಿನಾಂಶಗಳನ್ನು ಬಳಸಲಾಗಿದೆ ಎಂದು ಹೇಳಿದೆ.