ಟಿ.ಎಂ. ಕೃಷ್ಣಾ ಅವರಿಗೆ ನೀಡಿದ್ದ ಎಂ.ಎಸ್. ಸುಬ್ಬಲಕ್ಷ್ಮೀ ಪ್ರಶಸ್ತಿಗೆ ಸುಪ್ರೀಂ ಕೋರ್ಟ್ ತಡೆ
Update: 2024-12-16 16:55 GMT
ಹೊಸದಿಲ್ಲಿ: ಕರ್ನಾಟಕ ಸಂಗೀತಗಾರ ಟಿ.ಎಂ. ಕೃಷ್ಣಾ ಅವರಿಗೆ ರವಿವಾರ ಪ್ರದಾನ ಮಾಡಲಾಗಿದ್ದ ಪ್ರತಿಷ್ಠಿತ ಸಂಗೀತ ಕಲಾನಿಧಿ ಎಂ.ಎಸ್. ಸುಬ್ಬಲಕ್ಷ್ಮಿ ಪ್ರಶಸ್ತಿಗೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ತಡೆ ನೀಡಿದೆ.
ಎಂ.ಎಸ್. ಸುಬ್ಬುಲಕ್ಷ್ಮೀ ಅವರ ಮೊಮ್ಮಗ ವಿ. ಶ್ರೀನಿವಾಸನ್ ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಹಾಗೂ ಎಸ್‌ವಿಎನ್ ಭಟ್ಟಿ ಅವರನ್ನು ಒಳಗೊಂಡ ಪೀಠ ಈ ಮಧ್ಯಂತರ ಆದೇಶ ನೀಡಿದೆ.
ಮುಖ್ಯವಾನಿಯ ಪ್ರಕಟಣೆಯಲ್ಲಿ ಮುದ್ರಣವಾದ ಲೇಖನದಲ್ಲಿ ಟಿ.ಎಂ. ಕೃಷ್ಣ ಅವರು ಎಂ.ಎಸ್. ಸುಬ್ಬಲಕ್ಷ್ಮೀ ಅವರ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಎಂ.ಎಸ್. ಸುಬ್ಬುಲಕ್ಷ್ಮೀ ಅವರ ಮೊಮ್ಮಗ ವಿ. ಶ್ರೀನಿವಾಸನ್ ಸಲ್ಲಿಸಿದ ಅರ್ಜಿ ಇತ್ಯರ್ಥವಾಗುವವರೆಗೆ ಆ ಪ್ರಶಸ್ತಿಯೊಂದಿಗೆ ನೀವು ಗುರುತಿಸಿಕೊಳ್ಳುವಂತಿಲ್ಲ ಎಂದು ಪೀಠ ಟಿ.ಎಂ. ಕೃಷ್ಣ ಅವರಿಗೆ ನಿರ್ದೇಶಿಸಿದೆ.
ಅಂತಿಮವಾಗಿ ಪೀಠ ಇತರ ಪ್ರತಿವಾದಿಗಳಿಗೆ ನೋಟಿಸು ಜಾರಿ ಮಾಡಿದೆ.