ವಕ್ಫ್ ಮಸೂದೆ ಕುರಿತ ಸಂಸದೀಯ ಸಮಿತಿ ಸಭೆಯಲ್ಲಿ ಜಟಾಪಟಿ : ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಕೈಗೆ ಗಾಯ
ಹೊಸದಿಲ್ಲಿ: ವಕ್ಫ್ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಬಿಜೆಪಿ ಮತ್ತು ಟಿಎಂಸಿ ನಾಯಕರ ನಡುವೆ ಜಟಾಪಟಿ ನಡೆದ ಬೆನ್ನಲ್ಲಿ ಸಮಿತಿಯಿಂದ ಒಂದು ದಿನದ ಮಟ್ಟಿಗೆ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಅಮಾನತುಗೊಳಿಸಲಾಗಿದೆ.
ಕೇಂದ್ರ ಸರ್ಕಾರದ ವಕ್ಫ್ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ, ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯ ಜೊತೆ ಮಾತಿನ ಚಕಮಕಿ ನಡೆಸಿದ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ, ಕೋಪದಿಂದ ಗಾಜಿನ ನೀರಿನ ಬಾಟಲಿ ಹೊಡೆದಿದ್ದು ಈ ವೇಳೆ ಅವರ ಕೈ ಬೆರಳುಗಳಿಗೆ ಗಾಯವಾಗಿದೆ. ಸಭೆಯಲ್ಲಿದ್ದ ಸಂಸದ ಅಸದುದ್ದೀನ್ ಉವೈಸಿ ಮತ್ತು ಎಎಪಿಯ ಸಂಜಯ್ ಸಿಂಗ್ ಅವರು ಕಲ್ಯಾಣ್ ಬ್ಯಾನರ್ಜಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ವಕ್ಫ್ ಮಸೂದೆ ಮೇಲಿನ ಚರ್ಚೆಯ ವೇಳೆ ಈ ವೇಳೆ ಕೆಲ ಪ್ರತಿಪಕ್ಷ ಸದಸ್ಯರು, ನಿವೃತ್ತ ನ್ಯಾಯಮೂರ್ತಿಗಳು ಮತ್ತು ವಕೀಲರ ಪಾತ್ರದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ವೇಳೆ ಘಟನೆ ನಡೆದಿದೆ.
ಕಲ್ಯಾಣ್ ಬ್ಯಾನರ್ಜಿ ಅವರು ಅಶಿಸ್ತಿನ್ನು ಮೆರದಿದ್ದಾರೆಂದು ಅವರನ್ನು ಸಮಿತಿಯಿಂದ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ. ಸಮಿತಿಯ ಅಧ್ಯಕ್ಷೆ ಮತ್ತು ಹಿರಿಯ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್, ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ನಡವಳಿಕೆಯನ್ನು ಖಂಡಿಸಿದ್ದಾರೆ.
ಕೋಲ್ಕತ್ತಾ ಹೈಕೋರ್ಟ್ ನ್ಯಾಯಧೀಶರಾಗಿದ್ದ ಅಭಿಜಿತ್ ಗಂಗೋಪಾಧ್ಯಾಯ, ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಬಳಿಕ ಪಶ್ಚಿಮ ಬಂಗಾಳದ ತಮ್ಲುಕ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.