ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ; 10 ಮಂದಿ ಕಾರ್ಮಿಕರು ಸಾವು
Update: 2024-10-04 10:05 GMT
ಉತ್ತರಪ್ರದೇಶ: ಕಾರ್ಮಿಕರನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ, ಟ್ರಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಕಾರ್ಮಿಕರು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಿರ್ಜಾಪುರ-ವಾರಣಾಸಿ ಗಡಿಯಲ್ಲಿ ಅಪಘಾತ ನಡೆದಿದ್ದು, ಭದೋಹಿ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯ ಮುಗಿಸಿ ಹಿಂತಿರುಗುತ್ತಿದ್ದ 13 ಮಂದಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎಂದು ಮಿರ್ಜಾಪುರ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಮಾಹಿತಿ ನೀಡಿದ್ದಾರೆ.
ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡ ಮೂವರು ಕಾರ್ಮಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.