"ಸತ್ಯಕ್ಕೆ ಗೆಲುವಾಗಿದೆ": ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿಗೆ ಗೌತಮ್ ಅದಾನಿ ಪ್ರತಿಕ್ರಿಯೆ

Update: 2024-01-03 11:16 GMT

 ಗೌತಮ್ ಅದಾನಿ (PTI)

ಹೊಸದಿಲ್ಲಿ: ಸತ್ಯಕ್ಕೆ ಗೆಲುವಾಗಿದ್ದು, ತಮ್ಮ ಸಮೂಹವು ಭಾರತದ ಪ್ರಗತಿಯ ಯಶೋಗಾಥೆಗೆ ಕೊಡುಗೆ ನೀಡುವುದನ್ನು ಮುಂದುವರಿಸಲಿದೆ ಎಂದು ಕೋಟ್ಯಧಿಪತಿ ಗೌತಮ್ ಅದಾನಿ, ಹಿಂಡೆನ್ ಬರ್ಗ್ ತಮ್ಮ ಸಮೂಹದ ಮೇಲೆ ಮಾಡಿದ್ದ ಆರೋಪದ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅದಾನಿ ಸಮೂಹದ ವಿರುದ್ಧ ವಿಶೇಷ ತನಿಖಾ ತಂಡ ಅಥವಾ ಸಿಬಿಐ ತನಿಖೆಗೆ ಆದೇಶಿಸಲು ಯಾವುದೇ ಆಧಾರಗಳಿಲ್ಲ ಎಂದು ಬುಧವಾರ ತನ್ನ ತೀರ್ಪಿನಲ್ಲಿ ಹೇಳಿರುವ ಸುಪ್ರೀಂ ಕೋರ್ಟ್, ಬಂಡವಾಳ ಮಾರುಕಟ್ಟೆ ನಿಯಂತ್ರಣ ಸಂಸ್ಥೆಯಾದ ಸೆಬಿ ಇನ್ನು ಮೂರು ತಿಂಗಳೊಳಗೆ ತನ್ನ ತನಿಖೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದೆ.

ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಗೌತಮ್ ಅದಾನಿ, “ಸತ್ಯಕ್ಕೆ ಗೆಲುವಾಗಿದೆ. ಸತ್ಯಮೇವ ಜಯತೆ. ನಮ್ಮ ಬೆನ್ನಿಗೆ ನಿಂತವರಿಗೆ ನಾವು ಆಭಾರಿಗಳಾಗಿದ್ದೇವೆ” ಎಂದು ಪ್ರತಿಕ್ರಿಯಿಸಿದ್ದಾರೆ.

“ಭಾರತದ ಪ್ರಗತಿಯ ಯಶೋಗಾಥೆಗೆ ನಮ್ಮ ವಿನಮ್ರ ಕೊಡುಗೆಯು ಮುಂದುವರಿಯಲಿದೆ. ಜೈ ಹಿಂದ್” ಎಂದೂ ಅವರು ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆಯು ತನ್ನ ವಿರುದ್ಧ ಮಾಡಿದ್ದ ಎಲ್ಲ ಆರೋಪಗಳನ್ನೂ ಅದಾನಿ ಸಮೂಹ ಅಲ್ಲಗಳೆದಿತ್ತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News