ಜಮ್ಮು ಮತ್ತು ಕಾಶ್ಮೀರ: ಇಬ್ಬರು ಯೋಧರನ್ನು ಅಪಹರಿಸಿದ ಉಗ್ರಗಾಮಿಗಳು

Update: 2024-10-09 08:01 GMT

ಸಾಂದರ್ಭಿಕ ಚಿತ್ರ (PTI)

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಿಂದ ಉಗ್ರಗಾಮಿಗಳು ಅಪಹರಿಸಿದ್ದ ಇಬ್ಬರು ಯೋಧರ ಪೈಕಿ ಓರ್ವ ಯೋಧ ಗುಂಡೇಟಿನಿಂದ ಮೃತಪಟ್ಟಿದ್ದು, ಮತ್ತೋರ್ವ ಯೋಧ ಉಗ್ರಗಾಮಿಗಳ ಹಿಡಿತದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 8ರಂದು ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅನಂತನಾಗ್ ಅರಣ್ಯ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಜಂಟಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಟೆರಿಟೋರಿಯಲ್ ಸೇನೆಯ 161ನೇ ಘಟಕದ ಇಬ್ಬರು ಯೋಧರನ್ನು ಉಗ್ರಗಾಮಿಗಳು ಅಪಹರಿಸಿದ್ದರು. ಈ ಪೈಕಿ ಓರ್ವ ಯೋಧ ಗುಂಡಿನ ದಾಳಿಗೆ ತುತ್ತಾದರೂ, ಉಗ್ರಗಾಮಿಗಳ ಹಿಡಿತದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಯೋಧನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಗತ್ಯ ಚಿಕಿತ್ಸೆಯನ್ನು ಒದಗಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಇದಾದ ನಂತರ, ಗುಂಡಿನ ದಾಳಿಗೆ ತುತ್ತಾಗಿದ್ದ ಅಪಹರಣಕ್ಕೀಡಾಗಿದ್ದ ಯೋಧ ಹಿಲಾಲ್ ಅಹ್ಮದ್ ಭಟ್ ಅವರ ಮೃತದೇಹ ಬುಧವಾರ ಅನಂತನಾಗ್ ನ ಪತ್ರಿಬಾಲ್ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಈ ಘಟನೆಯು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಮರುದಿನ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News