ಚೆನ್ನೈನಲ್ಲಿ ಇಬ್ಬರು ಮಕ್ಕಳಲ್ಲಿ HMPV ಪತ್ತೆ : ಭಾರತದಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ

Update: 2025-01-06 15:47 GMT

ಸಾಂದರ್ಭಿಕ ಚಿತ್ರ (credit: economic times)

ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಇಬ್ಬರು ಮಕ್ಕಳಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್(HMPV) ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.

ಚೆನ್ನೈ ನಗರದ ಎರಡು ಆಸ್ಪತ್ರೆಗಳಲ್ಲಿ HMPV ಎರಡು ಪ್ರಕರಣಗಳು ಪತ್ತೆಯಾಗಿದೆ. ಇದರ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು HMPV ತಪಾಸಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳು ಮತ್ತು HMPV ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಚರ್ಚಿಸಲು ಸಭೆ ನಡೆಸಿದ್ದಾರೆ.

ಈವರೆಗೆ ದೇಶದಲ್ಲಿ 5 HMPV ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಆರೋಗ್ಯ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಹೇಳಿದ್ದಾರೆ.

ಜನವರಿ 6ರಂದು HMPVಯ ಐದು ಪ್ರಕರಣಗಳು ಪತ್ತೆಯಾಗಿದೆ. ಐದರಲ್ಲಿ ಎರಡು ಕರ್ನಾಟಕದಲ್ಲಿ ಪತ್ತೆಯಾದರೆ, ಚೆನ್ನೈನಲ್ಲಿ ಎರಡು ಮತ್ತು ಅಹಮದಾಬಾದ್ ನಲ್ಲಿ ಒಂದು HMPV ಪ್ರಕರಣ ಪತ್ತೆಯಾಗಿದೆ ಎಂದು  ತಿಳಿದು ಬಂದಿದೆ.


Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News