ಮಹಾರಾಷ್ಟ್ರ: ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆ

Update: 2024-09-20 05:25 GMT

Photo: PTI

ಮಹಾರಾಷ್ಟ್ರ: ನಂದೂರ್‌ಬಾರ್‌ನಲ್ಲಿ ಗುರುವಾರ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟದಲ್ಲಿ ಕನಿಷ್ಠ 7 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಲಿವಾಡ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಈ ಘಟನೆ ನಡೆದಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ನಿಯೋಜಿಸಲಾಗಿದ್ದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಇಬ್ಬರು ಅಧಿಕಾರಿಗಳು ಮತ್ತು ಐವರು ಪೊಲೀಸ್ ಪೇದೆಗಳು ಗಾಯಗೊಂಡಿದ್ದಾರೆ. ಘಟನೆ ವೇಳೆ ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ನಂದೂರ್‌ಬಾರ್ ಪೊಲೀಸ್ ಅಧೀಕ್ಷಕರ ವಾಹನ ಮತ್ತು ಬೆಂಗಾವಲು ವಾಹನಕ್ಕೆ ಹಾನಿಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಉದ್ರಿಕ್ತ ಗುಂಪು ಮನೆಗೆ ಬೆಂಕಿ ಹಚ್ಚಿದ್ದು, ಎಲ್‌ಪಿಜಿ ಸಿಲಿಂಡರ್‌ಗಳನ್ನು ಸುಡಲು ಪ್ರಯತ್ನಿಸಿದೆ. ಘರ್ಷಣೆ ನವನಾಥ್ ತೆಕಡಿ ಮತ್ತು ಶಹದುಲ್ಲಾ ನಗರಕ್ಕೂ ವ್ಯಾಪಿಸಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ. ಧುಲೆ ಮತ್ತು ಇತರ ಪ್ರದೇಶಗಳಿಂದ ಹೆಚ್ಚುವರಿ ಪಡೆಗಳನ್ನು ಕರೆಸಲಾಗಿದೆ. ಜಿಲ್ಲೆಗಳಲ್ಲಿ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನೆಗೆ ಸಂಬಂಧಿಸಿ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯ ಬುಡಕಟ್ಟು ಅಭಿವೃದ್ಧಿ ಸಚಿವ ವಿಜಯ್ ಕುಮಾರ್ ಗವಿತ್ ಘಟನೆ ಬೆನ್ನಲ್ಲಿ ಶಾಂತಿಗಾಗಿ ಮನವಿ ಮಾಡಿದ್ದು, ಜನರು ವದಂತಿಗಳನ್ನು ಹರಡಬೇಡಿ ಎಂದು ಕೇಳಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News