ಐರ್ಲೆಂಡ್ ನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತ್ಯು

Update: 2025-02-03 17:07 IST
ಐರ್ಲೆಂಡ್ ನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತ್ಯು

Photo credit: maktoobmedia.com

  • whatsapp icon

ಕೌಂಟಿ ಕಾರ್ಲೊ (ಐರ್ಲೆಂಡ್): ಕೌಂಟಿ ಕಾರ್ಲೊದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಐರ್ಲೆಂಡಿನ ಭಾರತೀಯ ಸಮುದಾಯ ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದೆ.

ಮೃತ ಯುವಕರನ್ನು ಭಾರ್ಗವ್ ಚಿತ್ತೂರಿ ಹಾಗೂ ಸುರೇಶ್ ಚೇರುಕುರಿ ಎಂದು ಗುರುತಿಸಲಾಗಿದೆ.

ಜನವರಿ 31ರ ಮುಂಜಾನೆ ಈ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಯಿಂದ ಜಾರಿರುವ ಅವರ ವಾಹನವು ರಾಥೊದ ರಾಷ್ಟ್ರೀಯ ಹೆದ್ದಾರಿ 80ರ ಬಳಿ ಮರವೊಂದಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಯುವಕರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು The Irish Times ಸುದ್ದಿ ಸಂಸ್ಥೆ ವರದಿ ಮಾಡಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ 20 ಹರೆಯದ ಓರ್ವ ಯುವಕ ಹಾಗೂ ಓರ್ವ ಯುವತಿ ಸೇರಿದಂತೆ ಇನ್ನಿಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದರೂ, ಅವರಿಬ್ಬರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಸದ್ಯ ಅವರು ಕಿಲ್ಕೆನ್ನಿಯಲ್ಲಿನ ಸೇಂಟ್ ಲ್ಯೂಕ್ಸ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತೀಯ ವಿದ್ಯಾರ್ಥಿಗಳ ಸಾವಿಗೆ ಡಬ್ಲಿನ್ ನಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿಯು ಸಂತಾಪ ವ್ಯಕ್ತಪಡಿಸಿದ್ದು, ದುಃಖತಪ್ತ ಕುಟುಂಬಗಳು ಹಾಗೂ ಗಾಯಾಳುಗಳಿಗೆ ನೆರವಿನ ಭರವಸೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News