ಕೇರಳದ ಕಣ್ಣೂರಿನಲ್ಲಿ ಸ್ಫೋಟ,ಇಬ್ಬರಿಗೆ ಗಾಯ

Update: 2024-04-05 15:31 GMT

ಸಾಂದರ್ಭಿಕ ಚಿತ್ರ

ಕಣ್ಣೂರು: ಕಣ್ಣೂರು ಜಿಲ್ಲೆಯ ಪಾಣೂರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೋಲಿಸರು ತಿಳಿಸಿದರು.

‘ಶುಕ್ರವಾರ ನಸುಕಿನ ಒಂದು ಗಂಟೆಯ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎನ್ನುವುದನ್ನು ನಾವು ಪರಿಶೀಲಿಸುತ್ತಿದ್ದೇವೆ ’ ಎಂದು ಪಾಣೂರ್ ಪೋಲಿಸ್ ಠಾಣೆಯ ಅಧಿಕಾರಿಯೋರ್ವರು ಸುದ್ದಿಗಾರರಿಗೆ ತಿಳಿಸಿದರು. ಆದರೆ ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಒದಗಿಸಲು ಅವರು ನಿರಾಕರಿಸಿದರು.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೋಲಿಸರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News