ಜಮ್ಮು ಮತ್ತು ಕಾಶ್ಮೀರ | ರಜೌರಿಯಲ್ಲಿ ಗಡಿ ರೇಖೆಯೊಳಗೆ ನುಸುಳಲು ಯತ್ನ; ಸೇನೆಯಿಂದ ಇಬ್ಬರು ಭಯೋತ್ಪಾದಕರ ಹತ್ಯೆ

Update: 2024-09-09 12:19 GMT

ಸಾಂದರ್ಭಿಕ ಚಿತ್ರ | PTI

ರಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಯತ್ನವನ್ನು ತಡೆದ ಸೇನಾ ಪಡೆಗಳು ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

X ನಲ್ಲಿನ ಪೋಸ್ಟ್‌ನಲ್ಲಿ, ಸೇನೆಯ ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ಒಳನುಸುಳುವಿಕೆಗೆ ಸಂಬಂಧಿಸಿದಂತೆ ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸರು ನೀಡಿದ ಮಾಹಿತಿಯ ಆಧಾರದ ಮೇಲೆ, ಸೆಪ್ಟೆಂಬರ್ 8 ಮತ್ತು 9 ರ ಮಧ್ಯರಾತ್ರಿ ಲಾಮ್ ಪ್ರದೇಶದಲ್ಲಿ ಒಳನುಸುಳುವಿಕೆ ತಡೆಯುವ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News