ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಭಯೋತ್ಪಾದಕರ ಹತ್ಯೆ
Update: 2025-04-23 11:17 IST

Photo credit: PTI
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
ಬಾರಾಮುಲ್ಲಾದ ಉರಿ ನಾಲಾದಲ್ಲಿ ಸರ್ಜೀವನ್ ಪ್ರದೇಶದಲ್ಲಿ ಒಳನುಸುಳಲು ಪ್ರಯತ್ನಿಸುತ್ತಿರುವಾಗ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡಲಾಗಿದೆ. ಭಯೋತ್ಪಾದಕರಿಂದ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬೈಸರಣ್ ಹುಲ್ಲುಗಾವಲಿನಲ್ಲಿ ಮಂಗಳವಾರ ಮಧ್ಯಾಹ್ನ ಮೂವರು ಶಂಕಿತ ಭಯೋತ್ಪಾದಕರು ಪ್ರವಾಸಿಗರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದರು.