ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

Update: 2024-09-22 11:03 GMT

ರಾಹುಲ್‌ ಗಾಂಧಿ ಜೊತೆ ಉದಯ್‌ ಭಾನು ಚಿಬ್‌ (Photo:X/@Uday_Bhanu9)

ಹೊಸದಿಲ್ಲಿ: ಉದಯ್ ಭಾನು ಚಿಬ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಉದಯ್ ಭಾನು ಚಿಬ್ ಅವರು ಭಾರತೀಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ಬಿ.ವಿ. ಶ್ರೀನಿವಾಸ್ ಅವರು ಇದುವರೆಗೆ ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದರು. ಅವರ ಕೊಡುಗೆಗಳನ್ನು ಪಕ್ಷವು ಶ್ಲಾಘಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News