ಸ್ಪೀಕರ್ ತೀರ್ಪು ಪ್ರಶ್ನಿಸಿ ಉದ್ಧವ್ ಠಾಕ್ರೆ ಅರ್ಜಿ ; ಮಹಾರಾಷ್ಟ್ರ ಸಿಎಂ, 38 ಶಾಸಕರಿಗೆ ಸುಪ್ರೀಂ ನೋಟಿಸ್

Update: 2024-01-22 17:00 GMT

ಉದ್ಧವ್ ಠಾಕ್ರೆ , ಏಕನಾಥ ಶಿಂದೆ | Photo : PTI

ಹೊಸದಿಲ್ಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಬಣದ ಶಿವಸೇನೆ ಶಾಸಕರನ್ನು ಅನರ್ಹಗೊಳಿಸಲು ವಿಧಾನಸಭಾ ಸ್ಪೀಕರ್ ನಿರಾಕರಣೆಯನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ನೇತೃತ್ವದ ಬಣವು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಸರ್ವೋಚ್ಚ ನ್ಯಾಯಾಲಯವು ಶಿಂದೆ ಮತ್ತು 38 ಶಾಸಕರಿಗೆ ನೋಟಿಸನ್ನು ಹೊರಡಿಸಿದೆ. ಎರಡು ವಾರಗಳಲ್ಲಿ ವಿವರವಾದ ಉತ್ತರಗಳನ್ನು ಸಲ್ಲಿಸುವಂತೆ ಅದು ಸೂಚಿಸಿದೆ.

ಸ್ಪೀಕರ್ ಆದೇಶವು ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಉಲ್ಲಂಘಿಸಿದೆ, ಹೀಗಾಗಿ ಅದು ವಿಷಯದ ವಿಚಾರಣೆಯನ್ನು ನಡೆಸುವುದು ಅಗತ್ಯವಾಗಿದೆ ಎಂದು ಠಾಕ್ರೆ ಬಣದ ಪರ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠಕ್ಕೆ ನಿವೇದಿಸಿಕೊಂಡರು.

ಶಿಂದೆ ಮತ್ತು 38 ಶಾಸಕರ ಅನರ್ಹತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ್ದ ಮತ್ತು ಶಿಂದೆ ಬಣವು ನಿಜವಾದ ಶಿವಸೇನೆಯಾಗಿದೆ ಎಂದು ಎತ್ತಿ ಹಿಡಿದಿದ್ದ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶವನ್ನು ಪ್ರಶ್ನಿಸಿ ಠಾಕ್ರೆ ಬಣವು ಜ.15ರಂದು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿತ್ತು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News