ಸನಾತನ ಧರ್ಮ ಕುರಿತ ಹೇಳಿಕೆಗೆ ʼಖಡಕ್ ಉತ್ತರʼ ನೀಡಲು ಪ್ರಧಾನಿ ಮೋದಿ ಸೂಚನೆ
ಸನಾತನ ಧರ್ಮ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಸರಿಯಾದ ಉತ್ತರ ನೀಡಬೇಕು ಎಂದು ಎಂದು ಪ್ರಧಾನಿ ನರೇಂದ್ರ ಮೋದಿ
Update: 2023-09-06 12:14 GMT
ಹೊಸದಿಲ್ಲಿ : ಸನಾತನ ಧರ್ಮ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಸರಿಯಾದ ಉತ್ತರ ನೀಡಬೇಕು ಎಂದು ಎಂದು ಪ್ರಧಾನಿ ನರೇಂದ್ರ ಮೋದಿಸಚಿವ ಸಂಪುಟ ಸಭೆಯಲ್ಲಿ ಹೇಳಿದ್ದಾರೆ ಎಂದು ದ ವೀಕ್ ವರದಿ ಮಾಡಿದೆ.
ಜಿ20 ಸಮಿತಿಯ ಸಭೆಗೂ ಮುನ್ನ ಸಂಪುಟದ ಸಚಿವರೊಂದಿಗೆ ಸಮಾಲೋಚನೆ ಮಾಡಲು ಕರೆದಿದ್ದ ಸಭೆಯಲ್ಲಿ ಮೋದಿ ಈ ಮಾತುಗಳನ್ನು ಹೇಳಿದ್ದಾರೆ ಎನ್ನಲಾಗಿದೆ. ಜೊತೆಗೆ, ಇಂಡಿಯಾ – ಭಾರತ ಕುರಿತ ಹೇಳಿಕೆಗಳನ್ನು ನೀಡದಂತೆ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.
ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ ಬೆನ್ನಲ್ಲೇ ಅದು ವಿವಾದ ಹುಟ್ಟುಹಾಕಿತ್ತು. ಬಳಿಕ ಎಫ್‌ಐಆರ್ ದಾಖಲಾಗಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.