5 ಹೊಸ ಜಿಲ್ಲೆಗಳನ್ನು ಪಡೆಯಲಿರುವ ಕೇಂದ್ರಾಡಳಿತ ಪ್ರದೇಶ ಲಡಾಖ್

Update: 2024-08-26 06:22 GMT

ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ಲಡಾಖ್‌ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.

ಹೊಸ ಜಿಲ್ಲೆಗಳೆಂದರೆ ಝನ್ಸ್ಕಾರ್, ದ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, " "ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಲಡಾಖ್ ಅನ್ನು ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಅನುಸರಿಸಲು, ಕೇಂದ್ರಾಡಳಿತ ಪ್ರದೇಶದಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು MHA ನಿರ್ಧರಿಸಿದೆ. ಹೊಸ ಜಿಲ್ಲೆಗಳಾದ ಝನ್ಸ್ಕರ್, ಡ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್‌ತಾಂಗ್. ಈ ಮೂಲಕ ಜನರಿಗೆ ಆಡಳಿತಾತ್ಮಕ ಪ್ರಯೋಜನಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುಲಾಗುವುದು. ಲಡಾಖ್ ಜನರಿಗೆ ಹೇರಳವಾದ ಅವಕಾಶಗಳನ್ನು ಸೃಷ್ಟಿಸಲು ಮೋದಿ ಸರ್ಕಾರ ಬದ್ಧವಾಗಿದೆ" ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News