‘ಗೂಂಡಾ ತೆರಿಗೆʼ: ರಸ್ತೆ ಅಗೆದ ಆರೋಪಿಗಳಿಂದಲೇ ನಷ್ಟವನ್ನು ವಸೂಲಿ ಮಾಡಲು ಆದಿತ್ಯನಾಥ್‌ ಆದೇಶ

Update: 2023-10-08 07:29 GMT

ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ (PTI)

ಲಕ್ನೊ: ಗುತ್ತಿಗೆದಾರ ‘ಗೂಂಡಾ ತೆರಿಗೆ’ ಪಾವತಿಸದ ಕಾರಣಕ್ಕೆ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರ ಆಪ್ತ ಶಹಜಹಾನ್‌ಪುರದಲ್ಲಿ ರಸ್ತೆಯನ್ನು ಅಗೆದಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಜಿಲ್ಲಾಡಳಿತ ಲೋಕೋಪಯೋಗಿ ಇಲಾಖೆಯಿಂದ (ಪಿಡಬ್ಲ್ಯುಡಿ) ವರದಿ ಕೇಳಿದ್ದು, ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣದ ಆರೋಪಿ, ಬಿಜೆಪಿ ಶಾಸಕನ ಸಹಚರ ಮತ್ತು ಇತರ ನಾಲ್ವರನ್ನು ಬಂಧಿಸಲಾಗಿದೆ. ರಸ್ತೆ ಅಗೆಯಲು ಬಳಸಿದ್ದ ಜೆಸಿಬಿ ಯಂತ್ರವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಜ್ಯ ಹೆದ್ದಾರಿಯನ್ನು ಮೂರು ಕಿಲೋಮೀಟರ್ ವರೆಗೆ ಅಗೆಯಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಅದಾಗ್ಯೂ, ಕತ್ರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ವೀರ್ ವಿಕ್ರಮ್ ಸಿಂಗ್ ಅವರು ಆರೋಪಿ ಜಗವೀರ್ ಜೊತೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ಜಗವೀರ್ ಅವರು ಈ ಹಿಂದೆ ನಿರ್ಮಾಣ ಕಂಪನಿಯ ಉದ್ಯೋಗಿಗಳನ್ನು ಬೆದರಿಸಿ, "5% ಕಮಿಷನ್" ಗೆ ಬೇಡಿಕೆ ಇಟ್ಟಿದ್ದರು ಎಂದು ಕಂಪೆನಿ ಮ್ಯಾನೇಜರ್ ಆರೋಪಿಸಿದ್ದಾರೆ. 

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಆರೋಪಿಗಳಿಂದ ನಷ್ಟವನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News