ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

Update: 2024-07-20 05:43 GMT

ಮನೋಜ್ ಸೋನಿ (PTI)

ಹೊಸದಿಲ್ಲಿ: ವೈಯಕ್ತಿಕ ಕಾರಣಗಳಿಂದ ಕೇಂದ್ರ ಲೋಕಸೇವಾ ಆಯೋಗದ (UPSC) ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಸೇವಾವಧಿ ಮೇ 2029ರವರೆಗೆ ಇತ್ತು ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

"ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸಂಬಂಧಿಸಿದಂತೆ ಕೇಂದ್ರ ನಾಗರಿಕ ಸೇವಾ ಆಯೋಗದ ಸುತ್ತ ಸೃಷ್ಟಿಯಾಗಿರುವ ವಿವಾದಕ್ಕೂ, ಮನೋಜ್ ಸೋನಿಯವರ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ" ಎಂದು  ಮೂಲಗಳು ದೃಢಪಡಿಸಿವೆ.

"ಹದಿನೈದು ದಿನಗಳ ಹಿಂದೆಯೇ ವೈಯಕ್ತಿಕ ಕಾರಣಗಳನ್ನು ನೀಡಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ" ಎಂದು ಮೂಲವೊಂದು ತಿಳಿಸಿದೆ ಎಂದು ವರದಿಯಾಗಿದೆ.

ಪರಿಣತ ಶಿಕ್ಷಣ ತಜ್ಞರಾದ 59 ವರ್ಷ ವಯಸ್ಸಿನ ಮನೋಜ್ ಸೋನಿ, ಜೂನ್ 27, 2017ರಲ್ಲಿ ಆಯೋಗದ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದ್ದರು. ಮೇ 16, 2023ರಲ್ಲಿ ಕೇಂದ್ರ ನಾಗರಿಕ ಸೇವಾ ಆಯೋಗದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಮನೋಜ್ ಸೋನಿಯವರ ಸೇವಾವಧಿ ಮೇ 15, 2029ರವರೆಗೆ ಇತ್ತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News