UPSC ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

Update: 2024-12-10 06:26 GMT

ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗವು ಐಎಎಸ್, ಐಪಿಎಸ್, ಐಎಫ್ ಎಸ್ ಸೇರಿದಂತೆ ಇತರ ಕೇಂದ್ರ ಸೇವಾ ಹುದ್ದೆಗಳ ನೇಮಕಾತಿಗಾಗಿ ನಡೆಸಿದ್ದ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ.

ನಾಗರಿಕ ಸೇವಾ ಮುಖ್ಯ ಪರೀಕ್ಷೆಯಲ್ಲಿ ಸುಮಾರು 2,845 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ. ಜೂನ್ 16 ರಂದು ನಡೆದ 2024ರ ನಾಗರಿಕ ಸೇವಾ ಪ್ರಿಲಿಮ್ಸ್ ಪರೀಕ್ಷೆಯಲ್ಲಿ 13.4 ಲಕ್ಷ ಅಭ್ಯರ್ಥಿಗಳಲ್ಲಿ 14,625 ಮಂದಿ ತೇರ್ಗಡೆಯಾಗಿದ್ದರು. ಸೆಪ್ಟೆಂಬರ್ 20 ರಿಂದ 29ರವರೆಗೆ ನಡೆದ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸಲಾಗಿದೆ ಎಂದು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಇತರ ಕೇಂದ್ರ ಸೇವೆಗಳ ಹುದ್ದೆಗಳಿಗಾಗಿ ಸಂದರ್ಶನಕ್ಕೆ ಅರ್ಹತೆ ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News