ಧ್ವನಿವರ್ಧಕಗಳ ಬಳಕೆ ಯಾವುದೇ ಧರ್ಮದ ಅವಿಭಾಜ್ಯ ಅಂಗವಲ್ಲ: ಬಾಂಬೆ ಹೈಕೋರ್ಟ್

Update: 2025-01-24 11:56 IST
Photo of loud speaker

ಸಾಂದರ್ಭಿಕ ಚಿತ್ರ (PTI)

  • whatsapp icon

ಮುಂಬೈ : ಧ್ವನಿವರ್ಧಕಗಳ ಬಳಕೆ ಯಾವುದೇ ಧರ್ಮದ ಅವಿಭಾಜ್ಯ ಅಂಗವಲ್ಲ ಎಂದು ಹೇಳಿದ ಬಾಂಬೆ ಹೈಕೋರ್ಟ್, ಸಾರ್ವಜನಿಕ ವೇದಿಕೆಗಳಲ್ಲಿ, ಧಾರ್ಮಿಕ ಸ್ಥಳಗಳಲ್ಲಿ ಅಥವಾ ಇತರ ಸಂಸ್ಥೆಗಳಲ್ಲಿ ಧ್ವನಿವರ್ಧಕಗಳಲ್ಲಿನ ಡೆಸಿಬಲ್ ಮಟ್ಟವನ್ನು ನಿಯಂತ್ರಿಸಲು ಕಾರ್ಯವಿಧಾನವನ್ನು ರಚಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಧ್ವನಿವರ್ಧಕಗಳ ಬಳಕೆ ಕುರಿತ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಧ್ವನಿವರ್ಧಕಗಳ ಬಳಕೆಗೆ ಡೆಸಿಬಲ್ ನಿರ್ಣಯಗೊಳಿಸುವಂತೆ ಮತ್ತು ಈ ಕುರಿತು ಪೊಲೀಸರಿಗೆ ನಿರ್ದೇಶನ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ಎಸ್ ಸಿ ಚಂದಕ್ ಅವರ ವಿಭಾಗೀಯ ಪೀಠವು, ಶಬ್ಧವು ಆರೋಗ್ಯಕ್ಕೆ ದೊಡ್ಡ ಅಪಾಯವಾಗಿದೆ. ಧ್ವನಿವರ್ಧಕಗಳನ್ನು ಬಳಸಲು ಅನುಮತಿ ನಿರಾಕರಿಸಿದರೆ ನಮ್ಮ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಯಾರೂ ಹೇಳಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಸ್ಥಳೀಯ ಮಸೀದಿಯಲ್ಲಿ ಧ್ವನಿ ವರ್ಧಕಗಳ ಬಳಕೆಯಿಂದ ಶಬ್ಧ ಮಾಲಿನ್ಯವಾಗುತ್ತದೆ ಎಂದು ಕುರ್ಲಾ-ಜಾಗೋ ನೆಹರೂ ನಗರ ನಿವಾಸಿಗಳ ಕಲ್ಯಾಣ ಸಂಘ ಮತ್ತು ಶಿವಸೃಷ್ಟಿ ಸಹಕಾರಿ ಹೌಸಿಂಗ್ ಸೊಸೈಟೀಸ್ ಅಸೋಸಿಯೇಷನ್ ಲಿಮಿಟೆಡ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಹೇಳಿಕೆಯನ್ನು ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News