ಉತ್ತರ ಪ್ರದೇಶ | ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ಹೊಂದಿದ್ದ ವೀಡಿಯೊ ಹಂಚಿಕೊಂಡಿದ್ದ ವ್ಯಕ್ತಿಯ ಬಂಧನ

Update: 2024-09-01 12:44 GMT

ಸಾಂದರ್ಭಿಕ ಚಿತ್ರ

ಮುಝಾಫ್ಫರ್ ನಗರ : ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ಹೊಂದಿದ್ದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ 28 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ರವಿವಾರ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪುರ್ಕಾಝಿ ಪ್ರದೇಶದ ಖೈಕೇರಿ ಗ್ರಾಮದ ವಿಶಾಲ್ ಎಂಬ ಯುವಕನನ್ನು ಶನಿವಾರ ಬಂಧಿಸಲಾಗಿದೆ ಎಂದು ಸರ್ಕಲ್ ಆಫೀಸರ್ ರಾಜ್ ಕುಮಾರ್ ಹೇಳಿದ್ದಾರೆ.

ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 352 (ಶಾಂತಿಭಂಗಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಹಾಗೂ 353 (ಸಾರ್ವಜನಿಕವಾಗಿ ಅಸಭ್ಯ ಹೇಳಿಕೆ) ಅಡಿ ಪ್ರಾಥಮಿಕ ಮಾಹಿತಿ ವರದಿಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News