ಉತ್ತರ ಪ್ರದೇಶ | ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿಯೇ ಪ್ರಥಮ ಆಯ್ಕೆ!
ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಬದಲು ರಾಹುಲ್ ಗಾಂಧಿ ಪ್ರಥಮ ಆಯ್ಕೆಯಾಗಿದ್ದಾರೆ. ಇದು ನರೇಂದ್ರ ಮೋದಿ ಅಂತ್ಯದ ಆರಂಭ ಎಂದು ಸಿಎಸ್‌ಡಿಎಸ್-ಲೋಕನೀತಿ ಸಮೀಕ್ಷೆಯ ವರದಿಯ ತುಣುಕನ್ನು ಹಂಚಿಕೊಂಡು ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಭವಿಷ್ಯ ನುಡಿದಿದ್ದಾರೆ.
ಸಿಎಸ್‌ಡಿಎಸ್-ಲೋಕನೀತಿ ನಡೆಸಿದ್ದ ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆಯ ಸಂದರ್ಭದಲ್ಲಿ ಮೋದಿ ಮ್ಯಾಜಿಕ್ ಕುಗ್ಗಿದೆ ಎಂಬ ಸಂಗತಿ ಬಯಲಾಗಿತ್ತು. ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದವರ ಪೈಕಿ ಶೇ. 36ರಷ್ಟು ಮಂದಿ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ಬಯಸಿದ್ದರೆ, ಶೇ. 32ರಷ್ಟು ಮಂದಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಹೇಳಿದ್ದಾರೆ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿತ್ತು.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದಲ್ಲಿ ಬಿಜೆಪಿ ಕೇವಲ 33 ಸ್ಥಾನ ಗಳಿಸಿ ನಿರಾಶಾದಾಯಕ ಪ್ರದರ್ಶನ ನೀಡಿದೆ. ಉತ್ತರ ಪ್ರದೇಶದಲ್ಲಿನ ಈ ಹೀನಾಯ ಸೋಲಿನಿಂದ ಬಿಜೆಪಿ ಸ್ವಂತ ಬಲದಲ್ಲಿ ಬಹುಮತ ಗಳಿಸಲು ವಿಫಲವಾಗಿದ್ದು, ಕೇವಲ 240 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಬಹುಮತ ಸಾಬೀತುಪಡಿಸಲು ಇನ್ನೂ 32 ಸ್ಥಾನಗಳ ಅಗತ್ಯವಿರುವುದರಿಂದ ಎನ್‌ಡಿಎ ಮಿತ್ರಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ಬೆಂಬಲವನ್ನೇ ಬಿಜೆಪಿ ಅವಲಂಬಿಸಿದೆ.
In Uttar Pradesh,
— Dhruv Rathee (@dhruv_rathee) June 8, 2024
Rahul Gandhi is now the first choice of Prime Minister instead of Narendra Modi
This is the beginning of the end for Modi.
Source: CSDS-Lokniti Post Poll survey pic.twitter.com/D3enaDXJZ3
ಈ ಹಿನ್ನೆಲೆಯಲ್ಲಿ ಸಿಎಸ್‌ಡಿಎಸ್-ಲೋಕನೀತಿ ಸಮೀಕ್ಷೆಯಲ್ಲಿ ಬಹಿರಂಗಗೊಂಡಿರುವ ಮಾಹಿತಿಯು ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.