ಸುರಂಗ ಕುಸಿತ: ಉತ್ತರಾಖಂಡ ಸಿಎಂ ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ

Update: 2023-11-20 12:16 GMT
Photo: PTI

ಹೊಸದಿಲ್ಲಿ: ಕಳೆದ ಒಂದು ವಾರದಿಂದ ಸುರಂಗದೊಳಗೆ ಸಿಕ್ಕಿಬಿದ್ದ 41 ಕಾರ್ಮಿಕರನ್ನು ಸ್ಥಳಾಂತರಿಸಲು ನಡೆಸಲಾಗುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದಾರೆ.

ಸುರಂಗದಲ್ಲಿ ನಡೆಸಲಾಗುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಪ್ರಧಾನಿ ಮೂರನೇ ಬಾರಿ ಮಾತುಕತೆ ನಡೆಸಿದ್ದಾರೆ.

ಅಗತ್ಯ ರಕ್ಷಣಾ ಸಾಧನಗಳು ಮತ್ತು ಸಂಪನ್ಮೂಲಗಳನ್ನು ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳ ನಡುವೆ ಪರಸ್ಪರ ಸಮನ್ವಯದ ಮೂಲಕ ಒದಗಿಸಲಾಗುತ್ತಿದೆ ಮತ್ತು ಸಿಕ್ಕಿಬಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗುವುದು. ಸಿಕ್ಕಿಬಿದ್ದಿರುವ ಕಾರ್ಮಿಕರ ನೈತಿಕ ಸ್ಥೈರ್ಯವನ್ನು ಕಾಪಾಡುವುದು ಅಗತ್ಯವಾಗಿದೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಮುಖ್ಯಮಂತ್ರಿಗಳು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ವಿವರವಾಗಿ ಪ್ರಧಾನಿಗೆ ವಿವರಿಸಿದರು ಮತ್ತು ಸಿಕ್ಕಿಬಿದ್ದ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಮತ್ತು ಅವರಿಗೆ ನಿರಂತರವಾಗಿ ಆಮ್ಲಜನಕ, ಪೌಷ್ಟಿಕ ಆಹಾರ ಮತ್ತು ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಪ್ರಧಾನಿ ಮೋದಿಯ ಗಮನಕ್ಕೆ ತಂದಿದ್ದಾರೆ.

ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ತಜ್ಞರೊಂದಿಗೆ ಸಮಾಲೋಚಿಸಿ ಎಲ್ಲಾ ಏಜೆನ್ಸಿಗಳು ಪರಸ್ಪರ ಸಂಪೂರ್ಣ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ. ಅವರು ಸ್ಥಳವನ್ನು ಪರಿಶೀಲಿಸಿದ್ದಾರೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಉತ್ತರಕಾಶಿ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಸಿಲ್ಕ್ಯಾರಾ ಸುರಂಗದಲ್ಲಿ ನವೆಂಬರ್ 12 ರಂದು ಮಣ್ಣು ಕುಸಿತ ಆರಂಭವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News