ಹಿರಿಯ ಪತ್ರಕರ್ತ ಝಫರ್‌ ಆಘಾ ನಿಧನ

Update: 2024-03-22 11:28 GMT

ಝಫರ್ ಆಘಾ (Photo: X/@NH_India)

ಹೊಸದಿಲ್ಲಿ: ಹಿರಿಯ ಪತ್ರಕರ್ತ, ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ಝಫರ್ ಆಘಾ (70) ಶುಕ್ರವಾರ ನಿಧನರಾಗಿದ್ದಾರೆ. ಅವರು ಅನಾರೋಗ್ಯ ಕಾರಣದಿಂದ ದಕ್ಷಿಣ ದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

1954 ರಲ್ಲಿ ಅಲಹಾಬಾದ್ ನಲ್ಲಿ ಜನಿಸಿದ ಅಘಾ ಅವರು, ಯಾದಗಾರ್ ಹುಸೇನಿ ಇಂಟರ್ ಕಾಲೇಜು ಮತ್ತು ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದರು. ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿಯಾಗಿದ್ದ ಅವರು ಅಲಹಾಬಾದ್ ವಿಶ್ವವಿದ್ಯಾನಿಲಯದಲ್ಲಿ ಪ್ರಗತಿಪರ ವಿದ್ಯಾರ್ಥಿ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

1979ರಲ್ಲಿ ʼಲಿಂಕ್‌ʼ ಮ್ಯಾಗಝಿನ್‌ ನಲ್ಲಿ ಪತ್ರಕರ್ತರಾಗಿ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ ಆಘಾ ಅವರು ತಮ್ಮ ವೃತ್ತಿ ಬದುಕಿನ ಕೊನೆಯ ಹಂತದಲ್ಲಿ ಅವರು ನ್ಯಾಷನಲ್ ಹೆರಾಲ್ಡ್ ಸಮೂಹ ಸೇರಿದರು. ತಮ್ಮ 45 ವರ್ಷಗಳ ಸುದೀರ್ಘ ವೃತ್ತಿ ಬದುಕಿನಲ್ಲಿ ʼದಿ ಪೇಟ್ರಿಯಾಟ್ʼ ʼಬ್ಯುಸಿನೆಸ್‌ ಆ್ಯಂಡ್ ಪೊಲಿಟಿಕಲ್ ಅಬ್ಸರ್ವರ್‌, ಇಂಡಿಯಾ ಟುಡೆ, ಈಟಿವಿ, ಇನ್‌ಕಿಲಾಬ್‌ ಡೈಲಿ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಅಲ್ಲದೇ ʼಖ್ವಾಮಿ ಆವಾಜ್‌ʼ ಎಂಬ ಉರ್ದು ಪತ್ರಿಕೆಯ ಮೊದಲ ಸಂಪಾದಕರೂ ಆಗಿದ್ದರು.

ದಿಲ್ಲಿ ಪತ್ರಕರ್ತರ ಒಕ್ಕೂಟದಲ್ಲಿ ಸಕ್ರಿಯರಾಗಿದ್ದರು ಅವರು 2017 ರವರೆಗೆ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗದ ಸದಸ್ಯರಾಗಿ ಮತ್ತು ನಂತರ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಝಫರ್‌ ಆಘಾ ನಿಧನಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ʼಎಕ್ಸ್ʼ ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ , " ಹಿರಿಯ ಪತ್ರಕರ್ತ, ಅಂಕಣಕಾರ, ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಯ ಮಾಜಿ ಪ್ರಧಾನ ಸಂಪಾದಕ ಝಫರ್ ಆಘಾ ನಿಧನ ಸುದ್ದಿ ತಿಳಿದು ತೀವ್ರ ದುಃಖಿತನಾಗಿದ್ದೇನೆ. ನಮ್ಮ ರಾಷ್ಟ್ರದ ಮೌಲ್ಯಗಳಿಗೆ ದೃಢವಾಗಿ ನಿಂತಿದ್ದ ಆಘಾ, ಸ್ನೇಹಿತನಾಗಿ, ತತ್ವಜ್ಞಾನಿಯಾಗಿ, ಮಾರ್ಗದರ್ಶಕರಾಗಿ ಹಲವರಿಗೆ ಸ್ಫೂರ್ತಿಯಾಗಿದ್ದರು" ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News