ಉತ್ತರ ಪ್ರದೇಶ| ಕುಡಿದ ಮತ್ತಿನಲ್ಲಿ ರಸ್ತೆಯ ಮಧ್ಯದಲ್ಲಿ ಕುಳಿತ ವ್ಯಕ್ತಿಗೆ ಟ್ರಕ್ ಢಿಕ್ಕಿ

Update: 2024-09-01 11:39 GMT

Photo : x

ಲಕ್ನೊ: ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ಭಾರೀ ಮಳೆಯ ನಡುವೆ ರಸ್ತೆಯ ಮಧ್ಯೆ ಕುಡಿದ ಮತ್ತಿನಲ್ಲಿ ಕುಡುಕನೋರ್ವ ಕುರ್ಚಿಯಲ್ಲಿ ಕುಳಿತಿದ್ದಾಗ ಟ್ರಕ್ ಢಿಕ್ಕಿ ಹೊಡೆದ ಘಟನೆ ನಡೆದಿದೆ.

ಅದೃಷ್ಟವಶಾತ್ ವ್ಯಕ್ತಿ ಸ್ವಲ್ಪದರಲ್ಲೇ ಪಾರಾಗಿದ್ದಾನೆ ಎನ್ನಲಾಗಿದೆ. ಆಗಸ್ಟ್ 29 ರಂದು ಪೊಲೀಸ್ ಬೂತ್ ಎದುರು ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ನಂತರ ಅಜಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಪೊಲೀಸ್ ಅಧಿಕಾರಿ ಶಿವನಾರಾಯಣ್ ವೈಶ್ಯ ಅವರು INDIA Today ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಕುಡುಕನು ಮಾನಸಿಕ ಅಸ್ವಸ್ಥ ಎಂದು ಆತನ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆತನನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News