ವಕ್ಫ್ ತಿದ್ದುಪಡಿ ಕಾಯಿದೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ಮುಂದಿನ ವಿಚಾರಣೆ ಮೇ.5ಕ್ಕೆ ಮುಂದೂಡಿಕೆ
Update: 2025-04-17 15:23 IST

ಸುಪ್ರೀಂ ಕೋರ್ಟ್ | PC : PTI
ಹೊಸದಿಲ್ಲಿ : ವಕ್ಫ್ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಮೇ.5ಕ್ಕೆ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯನ್ನು ಗುರುವಾರ ನಡೆಸಿತು. ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ನೇಮಕಾತಿ ಮತ್ತು ವಕ್ಫ್ ಕಾಯಿದೆಗೆ ಪ್ರಮುಖ ತಿದ್ದುಪಡಿ ಮಾಡದಂತೆ ಸೂಚಿಸಿತು.
ವಕ್ಫ್ ತಿದ್ದುಪಡಿ ಕಾಯಿದೆಯ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳ ಮುಂದಿನ ವಿಚಾರಣೆ ಮೇ.5ರಂದು ಮಧ್ಯಾಹ್ನ 2ಗಂಟೆಗೆ ನಡೆಯಲಿದೆ.