ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಮರ ಆಸ್ತಿ ಹಕ್ಕುಗಳನ್ನು ಕಸಿದುಕೊಳ್ಳುವ ಗುರಿ ಹೊಂದಿರುವ ಅಸ್ತ್ರ : ರಾಹುಲ್ ಗಾಂಧಿ

Update: 2025-04-03 11:16 IST
ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಮರ ಆಸ್ತಿ ಹಕ್ಕುಗಳನ್ನು ಕಸಿದುಕೊಳ್ಳುವ ಗುರಿ ಹೊಂದಿರುವ ಅಸ್ತ್ರ : ರಾಹುಲ್ ಗಾಂಧಿ

Photo | PTI

  • whatsapp icon

ಹೊಸದಿಲ್ಲಿ : ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಮರನ್ನು ಕಡೆಗಣಿಸುವ ಮತ್ತು ಅವರ ವೈಯಕ್ತಿಕ ಕಾನೂನುಗಳು ಮತ್ತು ಆಸ್ತಿ ಹಕ್ಕುಗಳನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿರುವ ಅಸ್ತ್ರವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಗುರುವಾರ ಅಂಗೀಕಾರವಾಗಿದೆ.  ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಆರೆಸ್ಸೆಸ್, ಬಿಜೆಪಿ ಮತ್ತು ಮಿತ್ರಪಕ್ಷಗಳಿಂದ ಸಂವಿಧಾನದ ಮೇಲಿನ ಈ ದಾಳಿಯು, ಈಗ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಆದರೆ ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಲಿದೆ ಎಂದು ಹೇಳಿದರು.  

ಕಾಂಗ್ರೆಸ್ ಪಕ್ಷವು ಈ ಶಾಸನವನ್ನು ಬಲವಾಗಿ ವಿರೋಧಿಸುತ್ತದೆ. ಈ ಮಸೂದೆಯು ಭಾರತದ ಕಲ್ಪನೆಯ ಮೇಲೆ ದಾಳಿ ಮಾಡುತ್ತದೆ ಮತ್ತು ಸಂವಿಧಾನದ 25ನೇ ವಿಧಿ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News