ಈ ಕಷ್ಟದ ಸಮಯದಲ್ಲಿ ಇಸ್ರೇಲ್‌ನೊಂದಿಗೆ ನಾವಿದ್ದೇವೆ: ಪ್ರಧಾನಿ ಮೋದಿ

Update: 2023-10-07 16:33 GMT

ನರೇಂದ್ರ ಮೋದಿ | Photo: PTI 

ಹೊಸದಿಲ್ಲಿ : ಹಮಾಸ್ ಹೋರಾಟಗಾರರು ಶನಿವಾರ ಇಸ್ರೇಲ್ ಮೇಲೆ ದಾಳಿ ನಡೆಸಿದ ಬಳಿಕ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ದೇಶವು ಯುದ್ಧ ಪರಿಸ್ಥಿತಿಯಲ್ಲಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳುತ್ತಿದ್ದಂತೆ, ಮೋದಿ ಇಸ್ರೇಲ್‌ನಲ್ಲಿ "ಭಯೋತ್ಪಾದಕ ದಾಳಿ" ಎಂದು ಖಂಡಿಸಿದ್ದಾರೆ.

"ಇಸ್ರೇಲ್‌ನಲ್ಲಿ ಭಯೋತ್ಪಾದಕ ದಾಳಿಯ ಸುದ್ದಿಯಿಂದ ತೀವ್ರ ಆಘಾತವಾಗಿದೆ. ನಮ್ಮ ಪ್ರಾರ್ಥನೆಗಳು ಅಮಾಯಕ ಬಲಿಪಶುಗಳು ಮತ್ತು ಅವರ ಕುಟುಂಬಗಳೊಂದಿಗೆ ಇವೆ. ಈ ಕಷ್ಟದ ಸಮಯದಲ್ಲಿ ನಾವು ಇಸ್ರೇಲ್‌ ಜೊತೆ ನಿಲ್ಲುತ್ತೇವೆ" ಎಂದು ಮೋದಿ x ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಶನಿವಾರ ಬೆಳಗಿನ ಜಾವ ಗಾಝಾದಿಂದ ಹಮಾಸ್ ಹೋರಾಟಗಾರರು ನಡೆಸಿದ ಹಠಾತ್ ದಾಳಿಗೆ ಕನಿಷ್ಠ 22 ಜನರು ಹತರಾದರು. ಈ ಕುರಿತು ಪ್ರತಿಕ್ರಿಯಿಸಿದ ಪ್ರಧಾನಿ ನೆತನ್ಯಾಹು ಯುದ್ಧ ಘೋಷಣೆಯಾಗಿದೆ. ಶತ್ರುಗಳ ಇದಕ್ಕೆ ಭಾರೀ ಬೆಲೆತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಇಸ್ರೇಲ್‌ನ ರಾಷ್ಟ್ರೀಯ ರಕ್ಷಣಾ ಸೇವೆಯು, ಹಮಾಸ್ ಹೋರಾಟಗಾರರ ಆಕ್ರಮಣದಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಇಸ್ರೇಲಿ ಭೂಪ್ರದೇಶದಲ್ಲಿ ನಡೆದ ಅತ್ಯಂತ ಮಾರಣಾಂತಿಕ ದಾಳಿ ಇದಾಗಿದೆ ಎಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News