ಪಶ್ಚಿಮ ಬಂಗಾಳ | ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Update: 2024-05-02 15:42 GMT

ಡಾ. ಸಿ.ವಿ. ಆನಂದ ಬೋಸ್ | PC : PTI  

ಕೋಲ್ಕತಾ : ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ.ವಿ. ಆನಂದ ಬೋಸ್ ಅವರು ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪ ಕೇಳಿಬಂದಿರುವುದಾಗಿ ವರದಿಯಾಗಿದೆ.

ರಾಜಭವನದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಲು ಹೋದಾಗ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಕೋಲ್ಕತ್ತಾದ ಹರೇ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಸಂಜೆ ಕಿರುಕುಳದ ಬಗ್ಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳ ಭೇಟಿಯ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಬೇಕಿತ್ತು.. ಈ ನಡುವೆಯೇ ರಾಜ್ಯಪಾಲರು ಲೈಂಕಿಗ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News