ಸೀಟು ಹಂಚಿಕೆ ಮಾತುಕತೆ ಅಂತಿಮಗೊಳ್ಳುವವರೆಗೂ ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ: ಅಖಿಲೇಶ್ ಯಾದವ್
Update: 2024-02-19 08:47 GMT
ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳ್ಳುವವರೆಗೂ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಗಿ ಪಾಲ್ಗೊಳ್ಳುವುದಿಲ್ಲ ಎಂದು ಸೋಮವಾರ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ANI ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, "ಸದ್ಯ ಮಾತುಕತೆ ನಡೆಯುತ್ತಿದೆ. ಅವರು ತಮ್ಮ ಪಟ್ಟಿ ನೀಡಿದ್ದಾರೆ. ನಾವು ನಮ್ಮ ಪಟ್ಟಿ ನೀಡಿದ್ದೇವೆ. ಒಮ್ಮೆ ಸೀಟು ಹಂಚಿಕೆ ಮಾತುಕತೆ ಮುಕ್ತಾಯಗೊಂಡ ನಂತರ, ನಾನು ಭಾರತ್ ಜೋಡೊ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದೇನೆ" ಎಂದು ತಿಳಿಸಿದ್ದಾರೆ.