ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ ನಾನಾ ಪಟೋಲೆ

Update: 2024-12-17 15:36 GMT

 ನಾನಾ ಪಟೋಲೆ | PC : PTI

ಮುಂಬೈ: ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ, ಅದರ ನೈತಿಕ ಹೊಣೆ ಹೊತ್ತು ನಾನಾ ಪಟೋಲೆ ಇಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತ ನಿರ್ಣಯವನ್ನು ಹೈಕಮಾಂಡ್‌ಗೇ ಬಿಡುವುದಾಗಿಯೂ ಅವರು ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನನ್ನು ಈ ದಿನ ಸಂಜೆಯ ವೇಳೆಗೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಈ ಹಿಂದೆಂದೂ ಕಾಣದಂತಹ ಹೀನಾಯ ಸೋಲನ್ನು ಕಾಂಗ್ರೆಸ್ ಅನುಭವಿಸಿದ ಹಿನ್ನೆಲೆಯಲ್ಲಿ, ತನ್ನನ್ನು ಸಂಘಟನಾ ಮುಖ್ಯಸ್ಥ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ನಾನಾ ಪಟೋಲೆ ಮನವಿ ಮಾಡಿದ್ದಾರೆ ಎಂದು ಈ ಹಿಂದೆ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಕಳೆದ ವಾರ ನಾನಿನ್ನೂ ರಾಜೀನಾಮೆ ಸಲ್ಲಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದ ನಾನಾ ಪಟೋಲೆ, ತಮ್ಮ ರಾಜೀನಾಮೆ ಕುರಿತು ಹಬ್ಬಿದ್ದ ವದಂತಿಗಳನ್ನು ತಳ್ಳಿ ಹಾಕಿದ್ದರು.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News