ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬಿಜೆಪಿ ಸಂಸದ ಬ್ರಿಜ್ ಭೂಷಣ್‌ಗೆ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ

Update: 2023-07-28 14:36 GMT

Photo: ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ | PTI

ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆನ್ನಲಾದ ಪ್ರಕರಣದಲ್ಲಿ, ಭಾರತೀಯ ಕುಸ್ತಿ ಫೆಡೆರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಸ್ವತಃ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ದಿಲ್ಲಿ ನ್ಯಾಯಾಲಯವೊಂದು ವಿನಾಯಿತಿ ನೀಡಿದೆ.

ಸಿಂಗ್‌ರ ವಕೀಲ ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್, ಈ ವಿನಾಯಿತಿ ನೀಡಿದರು. ಆರೋಪಿಯು ಸಂಸತ್ ಸದಸ್ಯನ ನೆಲೆಯಲ್ಲಿ ತನ್ನ ಕರ್ತವ್ಯಗಳನ್ನು ನಿಭಾಯಿಸುವಲ್ಲಿ ವ್ಯಸ್ತನಾಗಿರುವುದರಿಂದ ಅವರಿಗೆ ನ್ಯಾಯಾಲಯಕ್ಕೆ ಬರಲು ಅಸಾಧ್ಯವಾಗಿದೆ ಎಂದು ವಕೀಲರು ನ್ಯಾಯಾಲಯಕ್ಕೆ ಹೇಳಿದರು.

ಅದೇ ವೇಳೆ, ಅಮಾನತಿನಲ್ಲಿರುವ ಫೆಡರೇಶನ್‌ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ನ್ಯಾಯಾಲಯದಲ್ಲಿ ಹಾಜರಾದರು.

ಈ ಪ್ರಕರಣದಲ್ಲಿ, ಮೆಟ್ರೋಪಾಲಿಟನ್ ನ್ಯಾಯಾಲಯವು ಜುಲೈ 20ರಂದು ಸಿಂಗ್ ಮತ್ತು ತೋಮರ್‌ಗೆ ಜಾಮೀನು ನೀಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News